Thursday, 12th December 2024

ಮಹಾರಾಷ್ಟ್ರದ ಮಾಜಿ ಗೃಹ ಸಚಿವರಿಗೆ ’ಇಡಿ’ ಬಿಸಿ

ನವದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಶೋಧಕಾರ್ಯ ಕೈಗೊಂಡಿದ್ದಾರೆ.

‘ಅಕ್ರಮ ಹಣ ವರ್ಗಾವಣೆ ನಿಯಂತ್ರ ಕಾಯ್ದೆ ಅಡಿ ಮಾಜಿ ಸಚಿವ ಅನಿಲ್ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ಸಚಿವರಿಗೆ ಸೇರಿದ ಕೆಲವು ಜಾಗಗಳಲ್ಲಿ ಶೋಧಕಾರ್ಯ ಕೈಗೊಳ್ಳಲಾಗಿದೆ’ ಎಂದು ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಅಧಿಕಾರಿಗಳು, ಎಫ್‌ಐಆರ್‌ ಆಧರಿಸಿ ಕಳೆದ ತಿಂಗಳು ಅನಿಲ್‌ ದೇಶಮುಖ್ ಸೇರಿದಂತೆ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಸೂಚಿಸಿರುವ ಬಾಂಬೆ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ ಅನಿಲ್‌ ದೇಶಮುಖ್ ಅವರನ್ನು ಪ್ರಾಥಮಿಕ ವಿಚಾರಣೆ ನಡೆಸಿತ್ತು.