Friday, 22nd November 2024

ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ ಶಿಕ್ಷಣ ಸಚಿವ

ಮುಂಬೈ: ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ.

ಇದಕ್ಕೆ ಕಾರಣ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು.

ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು. ಈ ಸಮಯದಲ್ಲಿ, ಅವರು ಫೇಸ್ ಶೀಲ್ಡ್ ಧರಿಸಿ ಮುಚ್ಚೆನ್ನರಿಕೆ ತೆಗೆದುಕೊಂಡಿದ್ದಾರೆ.

ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಇಲ್ಲಿಯೂ ಮಸಿ ಎರಚಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಬಂದ ಕಾರಣ ಪೊಲೀಸರು ಎಚ್ಚರಿಕೆ ನೀಡಿದ್ದರು.

ಸಚಿವರು, ಸಮಾಜ ಸುಧಾರಕರಾದ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸರ್ಕಾರದ ಅನುದಾನ ಅವಲಂಬಿಸಿರದೆ ಹಣಕ್ಕಾಗಿ ಜನರ ಬಳಿ “ಭಿಕ್ಷೆ” ಬೇಡಿದ್ದರು ಎಂಬ ಹೇಳಿಕೆ ನೀಡಿದ್ದರು.

ಇನ್ನು, ಸಾಮಾಜಿಕ ಮಾಧ್ಯಮದಲ್ಲಿ ಚಂದ್ರಕಾಂತ್ ಪಾಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ ಆರೋಪದ ಮೇಲೆ ಕೋಟ್ರೂಡ್ ಪೊಲೀಸರು ಮತ್ತೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Read E-Paper click here