Thursday, 19th September 2024

ನೆಲ್ಲೂರು: ಭೀಕರ ರಸ್ತೆ ಅಪಘಾತ, ಎಂಟು ಮಂದಿ ಸಾವು

 ಅಮರಾವತಿ: ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ.

ಶ್ರೀಶೈಲಂ ಹಾಗೂ ಇತರೆ ದೇವಾಲಯಕ್ಕೆ ಭೇಟಿ ನೀಡಿದ್ದ ತಮಿಳುನಾಡು ಮೂಲದ ಭಕ್ತರು ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದರು.

ಬುಚ್ಚಿರೇಡಿಪಲೆಂ ಮಂಡಲದ ದಾಮರಮಡುಗು ಗ್ರಾಮದ ಬಳಿ ಟೆಂಪೋ ತೆರಳುತ್ತಿದ್ದು, ಈ ವೇಳೆ ಸರಕು ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

Leave a Reply

Your email address will not be published. Required fields are marked *