Saturday, 23rd November 2024

ಪಂಜಾಬ್‌ ಚುನಾವಣೆ ಮುಂದೂಡಿಕೆ: ಇಂದು ಆಯೋಗದ ನಿರ್ಧಾರ ಪ್ರಕಟ ?

ನವದೆಹಲಿ: ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆಯಂತೆ ಪಂಜಾಬ್‌ನ ವಿಧಾನಸಭಾ ಚುನಾವಣೆಯನ್ನು ಮುಂದೂಡಬಹುದೇ ಎಂಬುದರ ಕುರಿತು ಸೋಮವಾರ ಚುನಾವಣಾ ಆಯೋಗದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಯೋಗವು ಮಧ್ಯಾಹ್ನದ ವೇಳೆಗೆ ಈ ವಿಷಯದ ಬಗ್ಗೆ ತನ್ನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಆಯೋಗಕ್ಕೆ ಬರೆದ ಪತ್ರದಲ್ಲಿ ಗುರು ರವಿದಾಸ್ ಜಯಂತಿ ಇರುವ ಕಾರಣಕ್ಕೆ ಫೆಬ್ರವರಿ 14 ರಂದು ನಡೆಯಲಿರುವ ಚುನಾವಣೆಯನ್ನು ಕನಿಷ್ಠ ಆರು ದಿನಗಳ ಕಾಲ ಮುಂದೂಡಬೇಕೆಂದು ಒತ್ತಾಯಿಸಿದ್ದರು.

ಪಂಜಾಬ್‌ನ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿ ಸಮುದಾಯದ ಪ್ರತಿನಿಧಿಗಳು, ಸಮುದಾಯದ ಹೆಚ್ಚಿನ ಸಂಖ್ಯೆಯ ಜನರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡಲಿದ್ದಾರೆ. ಗುರು ರವಿದಾಸ್ ಅವರ ಜನ್ಮದಿನ ಫೆಬ್ರವರಿ 16 ರಂದು ಆಚರಿಸಲಾಗುತ್ತದೆ.