Monday, 16th September 2024

ಕೆಲವೇ ನಿಮಿಷಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚು.ಆಯೋಗದ ಸುದ್ದಿಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದೆ.

ಆಯೋಗ ಸುದ್ದಿಗೋಷ್ಠಿ ಆಯೋಜಿಸಿದ್ದು, ಡೆಪ್ಯುಟಿ ಇಲೆಕ್ಷನ್ ಕಮಿಷನರ್ ಗಳಾದ ಸುದೀಪ್ ಜೈನ್, ಚಂದ್ರಭೂಷಣ್ ಕುಮಾರ್ ಮತ್ತು ಅಶೀಶ್ ಕುಂದ್ರಾ ಅವರು ಜಂಟಿಯಾಗಿ ಮಾಧ್ಯಮಕ್ಕೆ ಮಾಹಿತಿ ನೀಡಲಿದ್ದಾರೆ ಎಂದು ವರದಿ ಹೇಳಿದೆ.

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 128 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ, ಜೆಡಿಯು 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

243 ಸದಸ್ಯಬಲದ ಬಿಹಾರ ವಿಧಾನಸಭೆ ಪೈಕಿ ಬಹುಮತಕ್ಕೆ 122 ಶಾಸಕರ ಬೆಂಬಲದ ಅಗತ್ಯವಿದೆ. ಬಿಜೆಪಿ ಏಕೈಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಭಾರತೀಯ ಜನತಾ ಪಕ್ಷ ಶೇ.20ರಷ್ಟು ಮತಪಡೆದಿದ್ದು, ಆರ್ ಜೆಡಿ ಶೇ.23.35ರಷ್ಟು ಮತಗಳನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ 15.46ರಷ್ಟು ಮತ ಪಡೆದಿದೆ ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *