Monday, 18th November 2024

Election Commission: ವಯನಾಡ್‌ ಬೈ ಎಲೆಕ್ಷನ್‌ ಡೇಟ್‌ ಅನೌನ್ಸ್‌; ನ.13ಕ್ಕೆ ಮತದಾನ, ನ.23ಕ್ಕೆ ರಿಸಲ್ಟ್‌

Election commission

ನವದೆಹಲಿ: ಭಾರತೀಯ ಚುನಾವಣಾ ಆಯೋಗವು (Election Commission) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ(Assembly Elections 2024)ಗಳ ಜತೆಗೆ ಉಪಚುನಾವಣೆಗಳ ದಿನಾಂಕವನ್ನೂ(Poll Dates) ಇಂದು ಘೋಷಿಸಿದೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌(Rajiv Kumar) ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ರಾಜೀನಾಮೆಯಿಂದ ತೆರವುಗೊಂಡಿಡುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13 ರಂದು ಬೈ ಎಲೆಕ್ಷನ್‌ ನಡೆಯಲಿದೆ

ನವೆಂಬರ್‌ 13ರಂದು ದೇಶಾದ್ಯಂತ ಒಟ್ಟು 47 ವಿಧಾನಸಭಾ ಕ್ಷೇತ್ರಗಳೊಂದಿಗೆ ಏಕೈಕ ಲೋಕಸಭಾ ಕ್ಷೇತ್ರ ವಯನಾಡ್‌ ಕೂಡ ಉಪ ಚುನಾವಣೆ ಎದುರಿಸುತ್ತಿದೆ. ಇನ್ನು ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದ್ದು, ಅದೇ ದಿನಾಂಕದಂದು ಫಲಿತಾಂಶ ಪ್ರಕಟವಾಗಲಿದೆ.

ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಯನಾಡ್ ಉಪಚುನಾವಣೆಗೆ ಮುಂದಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ಷೇತ್ರದಿಂದ ತಮ್ಮ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka by election) ಮುಹೂರ್ತ ಫಿಕ್ಸ್‌ ಆಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ನ.13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಚುನಾವಣಾ ಆಯೋಗವು ಅ.18ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಅ.25 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅ.30 ಕಡೆಯ ದಿನವಾಗಿದೆ. ಕರ್ನಾಟಕ ಮೂರು ಕ್ಷೇತ್ರಗಳಾದ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ನವೆಂಬರ್‌ 13ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನೂ ಓದಿ: Karnataka by election: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್‌; ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ