ನವದೆಹಲಿ: ಹರಿಯಾಣ ಚುನಾವಣೆಯಲ್ಲಿ (Election Results 2024) ಬಿಜೆಪಿಯ ಸಾಧನೆಯನ್ನು “ಅಮೋಘ ಗೆಲುವು” ಎಂದು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪಿಎಂ ಮೋದಿ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯವು ಗೆದ್ದಿದೆ ಎಂದು ಹೇಳಿದ್ದಾರೆ. ಜನರ ಆಕಾಂಕ್ಷೆಗಳನ್ನು ಪೂರೈಸಲು ತಮ್ಮ ಪಕ್ಷವು ಸಿಗುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
हरियाणा का हृदय से आभार!
— Narendra Modi (@narendramodi) October 8, 2024
भारतीय जनता पार्टी को एक बार फिर स्पष्ट बहुमत देने के लिए मैं हरियाणा की जनशक्ति को नमन करता हूं। यह विकास और सुशासन की राजनीति की जीत है। मैं यहां के लोगों को विश्वास दिलाता हूं कि उनकी आकांक्षाओं को पूरा करने के लिए हम कोई कोर-कसर नहीं छोड़ेंगे।
ಬಿಜೆಪಿಯ ಗೆಲುವಿನಲ್ಲಿ ಪಕ್ಷದ ಕಾರ್ಯಕರ್ತರ ಸಮರ್ಪಣೆಗೆ ಅವರು ಕೃತಜ್ಞತೆ ಸಲ್ಲಿಸಿದರು. ನೀವು ರಾಜ್ಯದ ಜನರಿಗೆ ಪೂರ್ಣ ಸೇವೆ ಸಲ್ಲಿಸಿದ್ದೀರಿ ಮಾತ್ರವಲ್ಲ, ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಅವರ ಬಳಿಗೆ ಕೊಂಡೊಯ್ದಿದ್ದೀರಿ. ಇದರ ಪರಿಣಾಮವಾಗಿ ಹರಿಯಾಣದಲ್ಲಿ ಬಿಜೆಪಿಗೆ ಈ ಐತಿಹಾಸಿಕ ಗೆಲುವು ಸಿಕ್ಕಿದೆ ಎಂದು ಮೋದಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಚುನಾವಣೆಯನ್ನು “ಬಹಳ ವಿಶೇಷ” ಎಂದು ಬಣ್ಣಿಸಿದ ಮೋದಿ, 370 ಮತ್ತು 35 (ಎ) ವಿಧಿಗಳನ್ನು ತೆಗೆದುಹಾಕಿದ ನಂತರ ಮೊದಲ ಬಾರಿಗೆ ಮತದಾನ ನಡೆದಿದ್ದರೂ, ಕೇಂದ್ರಾಡಳಿತ ಪ್ರದೇಶವು ಹೆಚ್ಚಿನ ಮತದಾನಕ್ಕೆ ಸಾಕ್ಷಿಯಾಗಿದೆ. ಈ ಮೂಲಕ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ತೋರಿಸುತ್ತದೆ ಎಂದು ಹೇಳಿದರು. ಇದಕ್ಕಾಗಿ ನಾನು ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ವ್ಯಕ್ತಿಯನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.
ಬಿಜೆಪಿಗೆ ಮತ ಹಾಕಿದ ಜನರಿಗೆ ಧನ್ಯವಾದ ಅರ್ಪಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ ಕಲ್ಯಾಣಕ್ಕಾಗಿ ಪಕ್ಷವು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಜನರಿಗೆ ಭರವಸೆ ನೀಡಿದರು.
ಜಮ್ಮು ಕಾಶ್ಮೀರದಲ್ಲಿ ಎನ್‌ಸಿ ದೊಡ್ಡ ಪಕ್ಷ
ಹರಿಯಾಣದಲ್ಲಿ ಬಿಜೆಪಿ ಐತಿಹಾಸಿಕ ಮೂರನೇ ಅವಧಿಗೆ ಸಜ್ಜಾಗಿದ್ದರೂ, ಜಮ್ಮು ಮತ್ತು ಕಾಶ್ಮೀರದಲ್ಲಿ ಅದೇ ರೀತಿಯ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ, ಏಕೆಂದರೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಚುನಾವಣಾ ಪೂರ್ವ ಮೈತ್ರಿ 48 ಸ್ಥಾನಗಳನ್ನು ಪಡೆಯುವ ಮೂಲಕ ಅರ್ಧದಷ್ಟು ದಾಟುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: Haryana Election Result : ಹರಿಯಾಣದಲ್ಲ ಜಿಲೇಬಿ ಟ್ರೆಂಡಿಂಗ್; ಕಾಂಗ್ರೆಸ್‌ಗೆ ಇದು ಸಿಹಿ ಸುದ್ದಿಯಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿದ ನಂತರ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ 29 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದು 2014 ರ ಚುನಾವಣೆಯಲ್ಲಿ ದಾಖಲಾದ ಸಾರ್ವಕಾಲಿಕ ಗರಿಷ್ಠ 25 ಸ್ಥಾನಗಳಿಗಿಂತ ಅಧಿಕ.