ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ.
ಇದಕ್ಕೂ ಮುನ್ನ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ತಂಗ್‌ಪಾವಾ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದ ಎನ್ ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಭಯೋತ್ಪಾದಕ ರನ್ನು ಹೊಡೆದುರುಳಿಸಲಾಗಿತ್ತು.
ಶೋಪಿಯಾನ್‌ನ ಡ್ರಾಚ್ ಪ್ರದೇಶದಲ್ಲಿ ನಡೆದ ಮೊದಲ ಎನ್‌ಕೌಂಟರ್‌ನಲ್ಲಿ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಜೊತೆ ನಂಟು ಹೊಂದಿದ್ದ ಮೂವರು ಸ್ಥಳೀಯ ಭಯೋತ್ಪಾದ ಕರು ಹತರಾಗಿದ್ದಾರೆ.
ಶೋಪಿಯಾನ್‌ನ ಮೂಲು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎರಡನೇ ಎನ್‌ಕೌಂಟರ್‌ನಲ್ಲಿ, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ನೊಂದಿಗೆ ಒಬ್ಬ ಸ್ಥಳೀಯ ಭಯೋತ್ಪಾದಕನನ್ನು ಎನ್‌ಕೌಂಟರ್ ಮಾಡಲಾಗಿದೆ.