Friday, 13th December 2024

ತ್ರಾಲ್ ಎನ್ಕೌಂಟರ್: ಐದು ಮಂದಿ ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ ಐದು ಭಯೋತ್ಪಾದಕನನ್ನು ಭಾರತೀಯ ಸೇನಾ ಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಅವಂತಿಪೋರಾ ಜಿಲ್ಲೆಯ ತ್ರಾಲ್ ನಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಸಿಕ್ಕ ಬೆನ್ನಲ್ಲೇ ಭಾರತೀಯ ಸೇನಾಪಡೆ ಗಳು ಕಾರ್ಯಾಚರಣೆಗಿಳಿದಿದ್ದವು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಗಳ ಮೇಲೆ ಗುಂಡಿನ ದಾಳಿ ನಡಸಿದ್ದಾರೆ.

ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಇದೀಗ ಐವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.