Thursday, 12th December 2024

ಜಾರ್ಖಂಡ್, ಬಿಹಾರ, ಪ.ಬಂಗಾಳದ 22 ಕಡೆ ‘ಇಡಿ’ ದಾಳಿ

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿ ಗಳು, ಜಾರ್ಖಂಡ್, ಬಿಹಾರ ಮತ್ತು ಪಶ್ಚಿಮ ಬಂಗಾಳದ 22 ಕಡೆಗಳಲ್ಲಿ ಗುರುವಾರ ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಂಚಿಯಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಛವಿ ರಂಜನ್ ಅವರಿಗೆ ಸಂಬಂಧಪಟ್ಟ ಸ್ಥಳಗಳಲ್ಲೂ ಶೋಧ ಕಾರ್ಯ ನಡೆಯುತ್ತಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಖಾಸಗಿ ವ್ಯಕ್ತಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದಂತೆ ವಿವಿಧೆಡೆ ದಾಳಿ ನಡೆಸಲಾಗಿದೆ.