Sunday, 15th December 2024

ಸಾಫ್ಟ್‌ವೇರ್ ಇಂಜಿನಿಯರ್ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿ ಯರ್ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಜಾರ್ಖಂಡ್‌ನಲ್ಲಿರುವ ಮಹಿಳೆ ಮನೆಯಿಂದ ಕೆಲಸ ಮಾಡುತ್ತಿದ್ದು, ತನ್ನ ಗೆಳೆಯ ನೊಂದಿಗೆ ಮೋಟಾರ್‌ ಬೈಕ್‌ನಲ್ಲಿ ಹೊರಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಎಂಟು-ಹತ್ತು ಜನರಿದ್ದ ಗುಂಪು ಜೋಡಿಯನ್ನು ತಡೆದಿದೆ. ಮಹಿಳೆಯ ಗೆಳೆಯನನ್ನು ಥಳಿಸಿ, ಮಹಿಳೆಯನ್ನು ಏಕಾಂತ ಪ್ರದೇಶಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ವೆಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ವರಿಷ್ಠಾಧಿ ಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.

ಮಹಿಳೆ ಪ್ರಸಿದ್ಧ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಆಕೆಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು.