Sunday, 8th September 2024

205 ರನ್ ಗಳಿಗೆ ಇಂಗ್ಲೆಂಡ್‌ ಆಲೌಟ್‌‌, ಶುಬ್ಮನ್‌ ಗಿಲ್‌ ಡಕ್‌ ಔಟ್‌

ಅಹಮದಾಬಾದ್: ಮೊಟೇರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಸರ್ವಪತನ ಕಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ತತ್ತರಿಸಿದ್ದು 205 ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಜಾನಿ ಬೇರ್ಸ್ಟೋವ್ 28, ಬೆನ್ ಸ್ಟೋಕ್ಸ್ 55, ಒಲಿ ಪೊಪೆ 29, ಡಾನ್ ಲಾರೆನ್ಸ್ 46 ರನ್ ಗಳಿಸಿದ್ದಾರೆ.

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಅಕ್ಷರ್ ಪಟೇಲ್ 4, ಅಶ್ವಿನ್ 3, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದಿದ್ದಾರೆ. ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾಗೆ ಮೊದಲ ಆಘಾತ ಎದುರಾಗಿದ್ದು ಶೂನ್ಯಕ್ಕೆ ಶುಭ್ಮನ್ ಗಿಲ್ ಔಟಾಗಿದ್ದಾರೆ.

ಇದಕ್ಕೂ ಮುನ್ನ, ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ಗೆ ತನ್ನ ನಿರ್ಧಾರ‍ಕ್ಕೆ ಪಶ್ಚಾತ್ತಾಪಪಟ್ಟಿತು.

15 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಡಾಮಿನಿಕ್ ಸಿಬ್ಲಿ (2) ಹಾಗೂ ಜ್ಯಾಕ್ ಕ್ರಾಲಿ (2) ಅವರನ್ನು ಕಳೆದ ಪಂದ್ಯದ ಹೀರೊ ಅಕ್ಷರ್ ಪಟೇಲ್ ಪೆವಿಲಿಯನ್‌ಗೆ ಅಟ್ಟಿದರು.

ಅಪಾಯಕಾರಿ ಜೋ ರೂಟ್ (5) ಅವರನ್ನು ಮೊಹಮ್ಮದ್ ಸಿರಾಜ್ ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿಸಿದರು. ಈ ನಡುವೆ ಬೆನ್ ಸ್ಟೋಕ್ಸ್ ಹಾಗೂ ಜಾನಿ ಬೈರ್‌ಸ್ಟೋ ಜೊತೆಯಾಟದಲ್ಲಿ ಭಾಗಿಯಾದರು. ಭೋಜನ ವಿರಾಮದ ಬೆನ್ನಲ್ಲೇ ಜಾನಿ ಬೈರ್‌ಸ್ಟೋ ಅವರನ್ನು (28) ಸಿರಾಜ್ ಹೊರದಬ್ಬಿದರು. ಸ್ಟೋಕ್ಸ್ ಅರ್ಧಶತಕದ ಬೆನ್ನಲ್ಲೇ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು. ಸ್ಟೋಕ್ಸ್ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 55 ರನ್ ಗಳಿಸಿದರು.

 

Leave a Reply

Your email address will not be published. Required fields are marked *

error: Content is protected !!