Thursday, 12th December 2024

ಉದ್ಯಮಿ ಹಿರೇನ್ ಅನುಮಾನಸ್ಪದ ಸಾವು: ಇಬ್ಬರ ಬಂಧನ

ಮುಂಬೈ: ಉದ್ಯಮಿ ಮನ್ಸುಖ್ ಹಿರೇನ್ ಅನುಮಾನಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾ ದನಾ ನಿಗ್ರಹ ದಳ (ಎಟಿಎಸ್‌) ಇಬ್ಬರನ್ನು ಬಂಧಿಸಿದೆ.

ಶನಿವಾರ ತಡ ರಾತ್ರಿ ಪೊಲೀಸ್‌ ಕಾನ್‌ಸ್ಟೆಬಲ್‌ ವಿನಾಯಕ ಶಿಂಧೆ ಮತ್ತು ಬೂಕ್ಕಿ ನರೇಶ್‌ ಧರೆ ಎನ್ನುವವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಚಾರಣೆಗಾಗಿ ಎಟಿಎಸ್‌ ಪ್ರಧಾನ ಕಚೇರಿಗೆ ಕರೆಯಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಬಂಧಿಸಲಾಗಿದೆ.

ಮನ್‍ಸುಖ್‍ ಹಿರೇನ್‍ ಅವರ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‍ಐಎ) ಕೇಂದ್ರ ಗೃಹ ಸಚಿವಾಲಯ ವಹಿಸಿತ್ತು. ಇದೇ ದಿನವೇ ಇವರನ್ನು ಬಂಧಿಸಲಾಗಿದೆ. ಇದುವರೆಗೆ ಎಟಿಎಸ್‌ ಈ ಪ್ರಕರಣದ ತನಿಖೆ ಕೈಗೊಂಡಿತ್ತು.

ರಾಜ್ಯ ಎಟಿಎಸ್‌ ಇದುವರೆಗೆ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಹಲವರನ್ನು ವಿಚಾರಣೆ ನಡೆಸಿದೆ. ಹಿರೇನ್‌ ಕುಟುಂಬದ ಸದಸ್ಯ ರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿತ್ತು. ಈಗ ಇಬ್ಬರ ಬಂಧನದಿಂದ ತನಿಖೆ ಮಹತ್ವದ ಹಂತಕ್ಕೆ ತಲುಪಿದೆ’ ಎಂದು ಅಧಿಕಾರಿ ಗಳು ತಿಳಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily