Tuesday, 23rd April 2024

ಕರ್ನಾಟಕದಲ್ಲಿ ಮಿಶ್ರ ಫಲ: ಬಂಗಾಳದಲ್ಲಿ ದೀದಿ ನಾಗಾಲೋಟ

ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಫಲಿತಾಂಶಗಳು ಹಂತ ಹಂತವಾಗಿ ಹೊರ ಬೀಳುತ್ತಿವೆ.

ಕರ್ನಾಟಕದ ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಗಳಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರವಾದ ಹಾನಗಲ್ ನಲ್ಲಿ ವಿಪಕ್ಷ ಕಾಂಗ್ರೆಸ್ ಗೆದ್ದಿದೆ.

ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಬಿಜೆಪಿ ಭದ್ರಕೋಟೆಗೂ ಲಗ್ಗೆ ಇಟ್ಟಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಗೆಲುವಿನ ನಾಗಾಲೋಟ ಮುಂದುವರಿಸಿದೆ. ಹಿಮಾಚಲ್ ಪ್ರದೇಶದಲ್ಲಿ ಕಾಂಗ್ರೆಸ್ ಎಲ್ಲಾ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಟಾಲಾ ರಾಜೇಂದರ್ ಪ್ರತಿ ಸ್ಪರ್ಧಿ ಟಿಆರ್ ಎಸ್ ನ ಗೆಲ್ಲು ಶ್ರೀನಿವಾಸ್ ಯಾದವ್ ಅವರಿಗಿಂತ ಮುನ್ನಡೆ ಸಾಧಿಸಿ ದ್ದಾರೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ.

ದಾದ್ರಾ ಮತ್ತು ನಗರ್ ಹವೇಲಿ ಹಾಊ ಹಿಮಾಚಲ್ ಪ್ರದೇಶದ ಮಾಂಡಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.

 

Leave a Reply

Your email address will not be published. Required fields are marked *

error: Content is protected !!