ವಾಷಿಂಗ್ಟನ್/ನವದೆಹಲಿ: ಎಲೆಕ್ಟ್ರಿಕ್ ಕಾರು ಉತ್ಪಾದನಾ ದೈತ್ಯ ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರು ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಲಾನ್ ಮಸ್ಕ್ ಅವರು ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
‘ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್ಗಳು ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆ ಯಾಗಿದೆ’ ಎಂದು ಎಲಾನ್ ಮಸ್ಕ್ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಎಲಾನ್ ಮಸ್ಕ್ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ ಅವರು ತಿರುಗೇಟು ನೀಡಿದ್ದಾರೆ.
‘ಸುರಕ್ಷಿತವಾಗಿರುವ ಡಿಜಿಟಲ್ ಹಾರ್ಡ್ವೇರ್ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್ನೆಟ್, ಬ್ಲ್ಯೂಟ್, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್ ತೆರೆಯೋಣ’ ಎಂದು ಟಾಂಟ್ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು.