Monday, 14th October 2024

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ,ಚಂದ್ರಶೇಖರ ಕಂಬಾರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ. ಶನಿವಾರ ದೆಹಲಿಯಲ್ಲಿ ನಡೆದಕಾರ್ಯಕ್ರಮದಲ್ಲಿ ಎಂ.ವೀರಪ್ಪ ಮೊಯಿಲಿಗೆ 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಮುಖ್ಯ ತೀರ್ಪುಗಾರರಾಗಿ ಇದ್ದ ಸಾಹಿತಿ ಅರವಿಂದ ಮಾಲಗತ್ತಿ, ಪದ್ಮಪ್ರಸಾದ್ ಹಾಗೂ ಎಸ್ ಜಿ ಸಿದ್ದರಾಮಯ್ಯ ನವರ ಸಮಿತಿ, 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.