Wednesday, 11th December 2024

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆ ತ್ಯಜಿಸಿದ ಅಚ್ಯುತಾನಂದನ್

ತಿರುವನಂತಪುರ: ಹಿರಿಯ ಸಿಪಿಎಂ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದಾರೆ.

ಅವರು ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರಲಿಲ್ಲ. ಇದು ಆಯೋಗದ ಚಟುವಟಿಕೆ ಗಳ ಮೇಲೆ ಭಾರೀ ಪರಿಣಾಮ ಬೀರಿತ್ತು. ಕಳೆದ ಅಕ್ಟೋಬರ್ ನಲ್ಲಿ 97ನೇ ವರ್ಷಕ್ಕೆ ಕಾಲಿಟ್ಟ ಅನುಭವಿ ನಾಯಕನಿಗೆ ಸಂಪೂರ್ಣ ವಿಶ್ರಾಂತಿ ಹಾಗೂ ನಿರಂತರ ವೈದ್ಯಕೀಯ ಆರೈಕೆಯನ್ನು ವೈದ್ಯರು ಶಿಫಾರಸು ಮಾಡಿದ್ದರು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ರಾಜೀನಾಮೆ ಸಲ್ಲಿಸಿದ್ದು, ಅನಾರೋಗ್ಯದಿಂದಾಗಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿ ಯಲು ಸಾಧ್ಯವಾಗುತ್ತಿಲ್ಲ ಎಂದು ಅಚ್ಯುತಾನಂದನ್ ತಿಳಿಸಿದ್ದಾರೆ.