Sunday, 15th December 2024

GN Saibaba : ಮಾವೋವಾದಿ ನಂಟು ಪ್ರಕರಣದಿಂದ ಖುಲಾಸೆಗೊಂಡಿದ್ದ ದೆಹಲಿ ವಿವಿ ಮಾಜಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ನಿಧನ

GN Saibaba

ನವದೆಹಲಿ: ಮಾವೋವಾದಿಗಳ ಸಂಪರ್ಕ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನಿಂದ ಖುಲಾಸೆಗೊಂಡ ಕೆಲವು ತಿಂಗಳ ನಂತರ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ (GN Saibaba) ಶನಿವಾರ ನಿಧನ ಹೊಂದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಬಾಂಬೆ ಹೈಕೋರ್ಟ್ ಸಾಯಿಬಾಬಾ ಅವರ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ಪ್ರಾಸಿಕ್ಯೂಷನ್ ಆರೋಪಗಳನ್ನು ಸಮಂಜಸವಾದ ಅನುಮಾನಕ್ಕೆ ಮೀರಿ ಸಾಬೀತುಪಡಿಸಲು ವಿಫಲವಾಗಿದೆ ಎಂದು ಕೋರ್ಟ್‌ ಹೇಳಿತ್ತು. ಅವರನ್ನು ನಾಗ್ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು.

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ವಿಚಾರಣಾ ನ್ಯಾಯಾಲಯವು ಸಾಯಿಬಾಬಾ ಅವರನ್ನು ದೋಷಿ ಎಂದು ಘೋಷಿಸಿದ ನಂತರ 2017 ರಿಂದ ನಾaಗ್ಪುರ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇರಿಸಲಾಗಿತ್ತು. ಇದಕ್ಕೂ ಮೊದಲು ಅವರು 2014 ರಿಂದ 2016 ರವರೆಗೆ ಜೈಲಿನಲ್ಲಿದ್ದರು ಮತ್ತು ನಂತರ ಜಾಮೀನು ಪಡೆದುಕೊಂಡಿದ್ದರು.

ಇದನ್ನೂ ಓದಿ: Baba Siddique : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ

ಮಾರ್ಚ್ 2017 ರಲ್ಲಿ, ಮಹಾರಾಷ್ಟ್ರದ ಗಡ್ಚಿರೋಲಿಯ ಸೆಷನ್ಸ್ ನ್ಯಾಯಾಲಯವು ಸಾಯಿಬಾಬಾ ಮತ್ತು ಪತ್ರಕರ್ತ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸೇರಿದಂತೆ ಇತರ ಐವರನ್ನು ಮಾವೋವಾದಿ ಸಂಪರ್ಕ ಮತ್ತು ದೇಶದ ವಿರುದ್ಧ ಯುದ್ಧ ಸಮರ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ತಪ್ಪಿತಸ್ಥರೆಂದು ಘೋಷಿಸಿತು.