Thursday, 12th December 2024

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಸುಧಾರಣೆ

ನವದೆಹಲಿ: ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ. ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮಂಗಳವಾರ ಹೇಳಿದರು.

ಅನಾರೋಗ್ಯ ಕಾಣಿಸಿಕೊಂಡಿದ್ದ ಮನಮೋಹನ್ ಅವರು ಸೋಮವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ಕಂಡುಬಂದಿತ್ತು. ಎರಡು ಡೋಸ್ ಕೋವಾಕ್ಸಿನ್ ಔಷಧಿ ನೀಡಲಾಗಿದೆ ಎಂದು ತಿಳಿಸಿದರು.

ಸದ್ಯ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಹರ್ಷ ವರ್ಧನ್ ತಮ್ಮ ಟ್ವೀಟ್‍ನಲ್ಲಿ ಹೇಳಿದ್ದಾರೆ.

ಭಾರತದ ಲಸಿಕೆ ಕೊರತೆ ಎದುರಿಸುತ್ತಿದೆ. ಮುಂಚಿತವಾಗಿಯೇ ಕೋವಿಡ್ ಲಸಿಕೆಯನ್ನು ಹೆಚ್ಚು ದಾಸ್ತಾನು ಮಾಡಿಕೊಳ್ಳುವುದು ಉತ್ತಮ. ಏಕೆಂದರೆ ದೇಶದ ಹಲವು ರಾಜ್ಯಗಳಲ್ಲಿ ಲಸಿಕೆ ಕೊರತೆಯಿಂದಾಗಿ ಕೋವಿಡ್ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದರು.