Thursday, 25th April 2024

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ

#Petrol #Diesel

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತ ಗೊಳಿಸಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ಗೆ 200 ರೂ.ಗಳ ಸಬ್ಸಿಡಿಯನ್ನು ನೀಡುತ್ತೇವೆ ಎಂದು ಹಣಕಾಸು ಸಚಿವರು ಘೋಷಿಸಿ ದರು.

ಹೆಚ್ಚಿನ ಆಮದು ಅವಲಂಬನೆಯನ್ನು ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿತ ಗೊಳಿಸುವುದಾಗಿ ನಿರ್ಮಲಾ ಸೀತಾ ರಾಮನ್ ಘೋಷಿಸಿದ್ದಾರೆ.

ಬಜೆಟ್ ನಲ್ಲಿ ಘೋಷಿಸಲಾದ ಸಾಮಾನ್ಯ ಸಬ್ಸಿಡಿಯಾದ 1.05 ಲಕ್ಷ ಕೋಟಿ ರೂ.ಗಿಂತ 1.10 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ರಸಗೊಬ್ಬರ ಸಬ್ಸಿಡಿಯನ್ನು ಸೀತಾರಾಮನ್ ಶನಿವಾರ ಘೋಷಿಸಿದರು.

error: Content is protected !!