ಶ್ರೀನಗರ: ಜಮ್ಮು-ಕಾಶ್ಮೀರ ಮತ್ತು ಹರಿಯಾಣ ಚುನಾವಣೋತ್ತರ ಸಮೀಕ್ಷೆಗಳು(Exit poll 2024) ಹೊರಬಿದ್ದಿದೆ. ಕನಿವೆ ರಾಜ್ಯದ ಜಮ್ಮು ಕಾಶ್ಮೀರ(Jammu-Kashmir Assembly election)ದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆದಿಲ್ಲದಿದ್ದರೂ, ಕಾಂಗ್ರೆಸ್-ಎನ್‌ಸಿ ಮೈತ್ರಿಕೂಟ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಮತ್ತೊಂದು ಕಡೆ ಸ್ವತಂತ್ರವಾಗಿ ಸ್ಪರ್ಧೆಗಿಳಿದಿರುವ ಬಿಜೆಪಿಯೂ ಇಂಡಿ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯುವ ಸಾಧ್ಯತೆ ಬಹಳಷ್ಟಿದೆ.
ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ಎದುರಿಸುತ್ತಿರುವ ಜಮ್ಮು-ಕಾಶ್ಮೀರದಲ್ಲಿ ಪೀಪಲ್ಸ್ ಪಲ್ಸ್ ವರದಿಯ ಪ್ರಕಾರ ಯಾವ ಪಕ್ಷವೂ ಸ್ಪಷ್ಟ ಬಹುಮತ ಸಾಧಿಸುವುದು ಕಷ್ಟಸಾಧ್ಯ. ಈ ಬಾರಿ ಜಂಟಿಯಾಗಿ ಕಣಕ್ಕಿಳಿದಿರುವ ಕಾಂಗ್ರೆಸ್‌ಮತ್ತು ಓಮರ್ ಅಬ್ದುಲ್ಲಾ ನೇತೃತ್ವದ ಎನ್‌ಸಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ. ದೈನಿಕ ಭಾಸ್ಕರ್, ಧ್ರುವ ರಿಸರ್ಚ್ ಮತ್ತು ಪೀಪಲ್ಸ್ ಪಲ್ಸ್ ಸೇರಿದಂತೆ ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಪೀಪಲ್ಸ್ ಪಲ್ಸ್ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ 33-35 ಸ್ಥಾನಗಳೊಂದಿಗೆ J&K ನಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ 23 ರಿಂದ 27 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದ್ದು, ಎರಡನೇ ಅತಿದೊಡ್ಡ ಪಕ್ಷವಾಗಲಿದೆ.
ಪಿಡಿಪಿ ಕಿಂಗ್ ಮೇಕರ್
ಕಳೆದ ಬಾರಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡು ಚುನಾವಣೆ ಗೆದ್ದು ಜಮ್ಮು-ಕಾಶ್ಮೀರದ ಗದ್ದುಗೆ ಹಿಡಿದಿದ್ದ ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಗೆ ಶೇಕಡಾ 5 ರಷ್ಟು ಮತ ಹಂಚಿಕೆಯಾಗಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. ಇನ್ನು ಪಿಡಿಪಿ ನಿರ್ಣಾಯಕ ಪಕ್ಷವಾಗಿ ಹೊರಹೊಮ್ಮಲಿದೆ. ಇತರರು ಈ ಪ್ರದೇಶದಲ್ಲಿ 18 ಶೇಕಡಾ ಮತಗಳನ್ನು ಗಳಿಸಬಹುದು ಎಂದು ಎಕ್ಸಿಟ್ ಪೋಲ್ ಸಮೀಕ್ಷೆ ಹೇಳಿದೆ.
ಜಮ್ಮು-ಕಾಶ್ಮೀರ | INC | BJP | JKNC+INC | PDP | ಇತರೆ |
ದೈನಿಕ ಭಾಸ್ಕರ್ | – | 20-25 | 35-40 | 4-7 | 12-16 |
ದ್ರುವ ರಿಸರ್ಚ್ | 3-6 | 28-30 | 28-30 | 5-7 | 8-16 |
ಪೀಪಲ್ಸ್ ಪಲ್ಸ್ | 13-15 | 23-27 | 33-35 | 7-11 | 4-5 |
ಈ ಸುದ್ದಿಯನ್ನೂ ಓದಿ: Exit poll 2024: ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟ: ಕಣಿವೆ ರಾಜ್ಯದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ಗೆ ಮುನ್ನಡೆ, ಹರ್ಯಾಣದಲ್ಲಿ ಕಾಂಗ್ರೆಸ್‌ಗೆ ಪ್ರಚಂಡ ಗೆಲುವು!