ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ಹೆಚ್ಚಿಸಲು ಕೇಂದ್ರ (Central Government employees Retirement) ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡುತ್ತಿದೆ. ಅದರ ಸತ್ಯಾಸತ್ಯತೆಗಳು (Fact Check) ಇದೀಗ ಹೊರ ಬಿದ್ದಿದೆ. ಖಾಸಗಿ ವಾಹಿನಿಯೊಂದು ಈ ಕುರಿತು ತನಿಖೆ ನಡೆಸಿದ್ದು, ಸತ್ಯಾಂಶಗಳನ್ನು ತೆರೆದಿಟ್ಟಿದೆ.
ಖಾಸಗಿ ವಾಹಿನಿಯೊಂದು ನಡೆಸಿದ ರಿಯಾಲಿಟಿ ಚೆಕ್ನಲ್ಲಿ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ರಿಂದ 62ಕ್ಕೆ ಹೆಚ್ಚಿಸಲು ಕೇಂದ್ರ ಅನುಮತಿ ನೀಡಿದೆಯೇ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿತ್ತು. ನಂತರ ಅದು ಸುಳ್ಳು ಕೇಂದ್ರ ಸರ್ಕಾರ ಅಂತಹ ಯಾವುದೇ ರೀತಿಯ ಆದೇಶ ಹೊರಬಿದ್ದಿಲ್ಲ ಎಂದು ತಿಳಿದು ಬಂದಿದೆ. ಸರ್ಕಾರವು ಅಂತಹ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಸ್ಪಷ್ಟಪಡಿಸಿದೆ. ಅದಲ್ಲದೆ, ಆಗಸ್ಟ್ 2023 ರಲ್ಲಿ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ತಿಳಿದು ಬದಿದೆ.
सोशल मीडिया पर वायरल हो रहे खबरों में दावा किया जा रहा है कि भारत सरकार ने केंद्रीय कर्मचारियों की रिटायरमेंट आयु में 2 साल की वृद्धि करने का निर्णय लिया है#PIBFactCheck
— PIB Fact Check (@PIBFactCheck) November 19, 2024
❌ यह दावा फर्जी है
✅ भारत सरकार ने ऐसा कोई निर्णय नहीं लिया है
⚠️ बिना सत्यता जांचे खबरें साझा न करें pic.twitter.com/KahXlVIrAF
ವೈರಲ್ ಆದ ಪೋಸ್ಟ್ ಬಗ್ಗೆ ಪರಿಶೀಲಿಸಲು, ಪೋಸ್ಟ್ಗೆ ಸಂಬಂಧಿಸಿದ ಕೀ ವರ್ಡ್ಸ್ಗಳನ್ನು ಅಂತರ್ಜಾಲಗಳಲ್ಲಿ ಹುಡುಕಲಾಯಿತು. ಆದರೆ ಅಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ಫಲಿತಾಂಶಗಳು ಸಿಗಲಿಲ್ಲ. ನಂತರ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವೆಬ್ ಸೈಟ್ಗಳನ್ನು ಹುಡುಕಲಾಯಿತು. ಆದರೆ ಎಲ್ಲಿಯೂ ಈ ಸಂಬಂಧಿಸಿದ ಮಾಹಿತಿಗಳು ಎಲ್ಲಿಯೂ ಸಿಕ್ಕಲಿಲ್ಲ. ಈ ವೈರಲ್ ಸುದ್ದಿ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ : Tirupati Laddoo: ತಿರುಪತಿ ಲಡ್ಡು ಪ್ರಸಾದ ವಿವಾದ; ವರದಿ ಕೇಳಿದ ಕೇಂದ್ರ ಸರ್ಕಾರ
ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನ. 06, 2024 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿರುವ ಹೊಸ ಕೇಂದ್ರ ಯೋಜನೆಯಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.