Friday, 20th September 2024

ಬಣ್ಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: 11 ಜನರು ಸಾವು

ವದೆಹಲಿ: ಬಣ್ಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿ 11 ಜನರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನವದೆಹಲಿಯ ಅಲಿಪುರ್‌ ಎಂಬಲ್ಲಿ ನಡೆದಿದೆ.

ರಾಸಾಯನಿಕಗಳ ಸ್ಫೋಟದಿಂದ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮೃತ ದೇಹಗಳು ಸುಟ್ಟುಕರಕಲಾಗಿದ್ದು, ಗುರುತು ಪತ್ತೆ ಇನ್ನೂ ಆಗಿಲ್ಲ.

ಎಲ್ಲ ಮೃತದೇಹಗಳನ್ನು ಬಾಬು ಜಗಜೀವನ್‌ ರಾಮ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗಾಯಗೊಂಡವರನ್ನು ರಾಜಾ ಹರೀಶ್‌ ಚಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.