ಕಿಡಿಗೇಡಿಗಳು ನನ್ನ ಹೆಸರಿನಲ್ಲಿ ಪ್ರೊಫೈಲ್ ಫೋಟೊ ಹಾಕಿ, ನಕಲಿ ಖಾತೆ ಸೃಷ್ಟಿಸಿದ್ದು, ಅದರ ಮೂಲಕ ಸಂಸದರು ಮತ್ತು ಇತರ ಅಧಿಕಾರಿಗಳಿಗೆ ಸಂದೇಶ ರವಾನಿಸಿದ್ದಾರೆ. ದಯವಿಟ್ಟು ಈ ನಂಬರ್ ಗಳಿಂದ ಬಂದ ಕರೆ ಮತ್ತು ಸಂದೇಶಗಳನ್ನು ನಿರ್ಲಕ್ಷಿಸಿ, ಈ ಬಗ್ಗೆ ನಮ್ಮ ಕಚೇರಿಗೆ ಮಾಹಿತಿ ನೀಡಿ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಟ್ವೀಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸ್ಪೀಕರ್ ಅವರ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಕ್ರಿಯೇಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಮೂವರನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ.
ಕಳೆದ ತಿಂಗಳು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಎಂದು ಬಿಂಬಿಸಿಕೊಂಡು ವಿಐಪಿಗಳಿಗೆ ಸಂದೇಶ ಕಳುಹಿಸಿ ಹಣಕಾಸಿನ ನೆರವು ಕೇಳಿದ್ದ ಪ್ರಕರಣ ನಡೆದಿತ್ತು. ಈ ಬಗ್ಗೆ ವಿಷಯ ತಿಳಿದ ನಾಯ್ಡು ಕಚೇರಿ ಗೃಹ ಸಚಿವಾಲಯಕ್ಕೆ ದೂರು