Thursday, 12th December 2024

ಬಾಲಿವುಡ್ ನಟರು, ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ಮೂಲಕ ವಂಚನೆ

ವದೆಹಲಿ: ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ವಂಚಕರ ಗುಂಪೊಂದು ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚಿಸಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.

ವಂಚಕರು ಆನ್‌ಲೈನ್‌ನಲ್ಲಿ ಲಭ್ಯವಿರುವ ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಜಿಎಸ್‌ಟಿ ಗುರುತಿನ ಸಂಖ್ಯೆ ಗಳಿಂದ ಪ್ಯಾನ್ ವಿವರಗಳನ್ನು ಪಡೆದು ಕೊಂಡು ಅವುಗಳನ್ನು ಬಳಸಿ ಪುಣೆ ಮೂಲದ ಫಿನ್‌ಟೆಕ್ ಸ್ಟಾರ್ಟ್‌ಅಪ್ ‘ಒನ್ ಕಾರ್ಡ್’ನಿಂದ ಕ್ರೆಡಿಟ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಈ ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ₹50 ಲಕ್ಷವನ್ನೂ ವಂಚಿಸಲಾಗಿದೆ. ಪ್ರಕರಣ ಸಂಬಂಧ ಐವರನ್ನು ಬಂಧಿಸ ಲಾಗಿದೆ ಎಂದು ಶಹಾದ್ರಾ ಡಿಸಿಪಿ ರೋಹಿತ್ ಮೀನಾ ತಿಳಿಸಿದ್ದಾರೆ.

ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ, ಬಾಲಿವುಡ್ ತಾರೆಯರಾದ ಅಭಿಷೇಕ್ ಬಚ್ಚನ್, ಶಿಲ್ಪಾ ಶೆಟ್ಟಿ, ಮಾಧುರಿ ದೀಕ್ಷಿತ್, ಇಮ್ರಾನ್ ಹಶ್ಮಿ ಅವರ ಹೆಸರು ಮತ್ತು ವಿವರಗಳನ್ನು ವಂಚಕರು ಬಳಸಿದ್ದಾರೆ. ತನಿಖೆ ನಡೆಯು ತ್ತಿರುವುದರಿಂದ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ರೋಹಿತ್ ಮೀನಾ ಹೇಳಿದ್ದಾರೆ.

ಬಂಧಿತ ಆರೋಪಿಗಳನ್ನು ಸುನಿಲ್ ಕುಮಾರ್, ಮೊಹಮದ್ ಆಸಿಫ್, ಪುನೀತ್, ಪಂಕಜ್, ವಿಶ್ವ ಭಾಸ್ಕರ್ ಶರ್ಮಾ ಎಂದು ಗುರುತಿಸಲಾಗಿದೆ.

ವಾಮಮಾರ್ಗದ ಮೂಲಕ ಪ್ಯಾನ್‌ ಕಾರ್ಡ್‌ಗಳನ್ನು ತಯಾರಿಸಿ ಅವುಗಳ ಮೇಲೆ ತಮ್ಮ ಚಿತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ವಿಡಿಯೊ ಪರಿಶೀಲನೆಯ ಸಮಯದಲ್ಲಿ ಚಿತ್ರ ಹೊಂದಿಕೆಯಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.