ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 2,856,618,347,396 ಯುಎಸ್ ಡಾಲರ್ ಗೇರಿದೆ. ಈಸಿ ಫೈನ್ಯಾನ್ಸ್ ಟೋಕನ್ ಕರೆನ್ಸಿ ಮೌಲ್ಯದಲ್ಲಿ ಅತಿಹೆಚ್ಚು ಏರಿಕೆಯಾಗಿದೆ.
ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳು ನಿಯಂತ್ರಣ ಹೇರಿವೆ. ಹೀಗಿದ್ದರೂ ಪ್ರಮುಖ ಕ್ರಿಪ್ಟೋ ಕರೆನ್ಸಿಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ. ಕ್ರಿಪ್ಟೋಕರೆನ್ಸಿಗಳ ಖರೀದಿ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ.
ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರ ಹೂಡಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಲಿಯನ್ ಡಾಲರ್‌ಗಳಷ್ಟು ಹಣ ವನ್ನು ಭಾರತೀಯರೇ ಹೂಡಿಕೆ ಮಾಡುತ್ತಿದ್ದಾರೆ.
ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವು ದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ.