ಕಳೆದ ಶುಕ್ರವಾರ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ್ದರು.
ಕೃಷಿ ಕಾಯ್ದೆ ಹಿಂದೆಗೆದುಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಮಾಡಿದ್ದರೂ ಸಂಸತ್ತಿನಲ್ಲಿ ಈ ಬಗ್ಗೆ ಮಸೂದೆ ಮಂಡಿಸಿ, ಅಂಗೀಕಾರವಾಗುವ ವರೆಗೆ ಪ್ರತಿಭಟನೆ ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ನ. 27ರಂದು ಸಭೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ. ನ. 29ರಂದು ಸಂಸತ್ ಭವನ ದತ್ತ ಪಾದಯಾತ್ರೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ.