Friday, 4th October 2024

ಕೃಷಿ ಕಾಯ್ದೆ ವಾಪಸ್‌: ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಬಗ್ಗೆ ಬುಧವಾರ ನಡೆಯ ಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ನ. 29ರಂದು ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ.

ಕಳೆದ ಶುಕ್ರವಾರ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ್ದರು.

ಕೃಷಿ ಕಾಯ್ದೆ ಹಿಂದೆಗೆದುಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಘೋಷಣೆ ಮಾಡಿದ್ದರೂ ಸಂಸತ್ತಿನಲ್ಲಿ ಈ ಬಗ್ಗೆ ಮಸೂದೆ ಮಂಡಿಸಿ, ಅಂಗೀಕಾರವಾಗುವ ವರೆಗೆ ಪ್ರತಿಭಟನೆ ಮುಂದುವರಿಸಲು ರೈತ ಸಂಘಟನೆಗಳು ನಿರ್ಧರಿಸಿವೆ.

ನ. 27ರಂದು ಸಭೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ. ನ. 29ರಂದು ಸಂಸತ್‌ ಭವನ ದತ್ತ ಪಾದಯಾತ್ರೆ ನಡೆಸಲು ಸಂಘಟನೆಗಳು ತೀರ್ಮಾನಿಸಿವೆ.