Sunday, 15th December 2024

ಕೃಷಿ ಕಾಯ್ದೆ ಚರ್ಚೆ: ವಿಶೇಷ ಅಧಿವೇಶನ ಕರೆಯಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿ.23 ರಂದು ರಾಜ್ಯ ವಿಧಾನ ಸಭೆಯ ವಿಶೇಷ ಅಧಿವೇಶನ ಕರೆಯಲು ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್ ಸರ್ಕಾರ ಸೋಮವಾರ ನಿರ್ಧರಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ಈ ವೇಳೆ ವಿಶೇಷ ಸಭೆ ಕರೆಯುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡುವ ಬಗ್ಗೆಯೂ ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.#

ಕೇರಳದ ಹಣಕಾಸು ಸಚಿವ ಥಾಮಸ್‌ ಐಸಾಕ್‌ ಅವರು, ಕೇರಳ ಸಚಿವ ಸಂಪುಟವು ಡಿ. 23ರಂದು ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಿದೆ. ಕೇರಳ ಸರ್ಕಾರವು ರೈತರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತದೆ’ ಎಂದು ತಿಳಿಸಿದ್ದಾರೆ.