Friday, 22nd November 2024

ಶಾಲಾ ಮಕ್ಕಳಲ್ಲಿ ಜ್ವರ: ಇಂದಿನಿಂದ ಸೆ.25 ರವರೆಗೆ ರಜೆ

ಪುದುಚೇರಿ: ಶಾಲಾ ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡಿದ್ದು, ಇಂದಿನಿಂದ ಸೆ.25 ರವರೆಗೆ ಒಂದರಿಂದ 8ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಪುದುಚೇರಿ ಸರ್ಕಾರ ರಜೆ ಘೋಷಿಸಿದೆ.

ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಸಮಸ್ಯೆ ಕಾಡುತ್ತಿದೆ. ಸಣ್ಣ ಮಕ್ಕಳಲ್ಲಿ ಜ್ವರ ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರು ವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯಿಂದ ವರದಿಯಾಗಿದೆ

ಈ ಹಿನ್ನೆಲೆ ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ ಶಿವಗಾಮಿ ಸೆ.17 ರಿಂದ 25ರ ವರಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು ಮತ್ತು ಶೀತ ಬಾಧೆಯಿಂದ ಈಗಾ ಗಲೇ ಸಾಕಷ್ಟು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಶಾಲೆಗಳಿಗೆ ರಜೆ ನೀಡಲು ಪುದುಚೇರಿ ಸರ್ಕಾರ ಮುಂದಾಗಿದೆ.