ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪದಲ್ಲಿ ಕುಮಾರ್ ವಿಶ್ವಾಸ್ ವಿರುದ್ಧ ಪಂಜಾಬ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಎಪ್ರಿಲ್ ನಲ್ಲಿ ಮೊಹಾಲಿಯಲ್ಲಿ ಬಿಜೆಪಿ ಮುಖಂಡ ಬಗ್ಗಾ ದ್ವೇಷ ಹರಡುವ ಹಾಗೂ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಎಫ್ ಐಆರ್ ದಾಖಲು ಮಾಡಲಾಗಿತ್ತು.
ಎಫ್ ಐಆರ್ ಕಾನೂನು ಬಾಹಿರ ಎಂದು ವಾದಿಸಿ ಕುಮಾರ್ ವಿಶ್ವಾಸ್, ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ -ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬಗ್ಗಾ ಕೂಡಾ, ತನ್ನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ವಜಾಗೊಳಿಸುವಂತೆ ಕೋರಿ ಪಂಜಾಬ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.