Saturday, 23rd November 2024

ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಘಟಕದಲ್ಲಿ ಅಗ್ನಿ ಅವಘಡ

ಪುಣೆ: ಕೋವಿಡ್ ಲಸಿಕೆ ತಯಾರಿಕೆಯ ಹೊಣೆ ಹೊತ್ತಿರುವ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಪುಣೆಯ ಘಟಕದಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ಪುಣೆಯಲ್ಲಿರುವ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಗೇಟ್ ನಂಬರ್ 1ರಲ್ಲಿ ಈ ಘಟನೆ ನಡೆದಿದ್ದು, ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಬೆಂಕಿ ಹೊತ್ತುಕೊಂಡಿದೆ. ಪ್ರಸ್ತುತ ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅವಘಡದಿಂದ ಲಸಿಕೆ ತಯಾರಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಿಲ್ಲ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.