Sunday, 15th December 2024

ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಬೋಗಿಯಲ್ಲಿ ಭಾರೀ ಅಗ್ನಿ ಅವಘಡ

ಉತ್ತರಾಖಂಡ : ದೆಹಲಿ-ಡೆಹ್ರಾಡೂನ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಸಿ4 ಬೋಗಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ʼನಿಂದಾಗಿ ಕಾನ್ಸ್ರೋ ಬಳಿ ಈ ಘಟನೆ ಸಂಭವಿಸಿದೆ.

ರೈಲಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಖಚಿತಪಡಿಸಿದ್ದಾರೆ. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.