Saturday, 14th December 2024

ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂರು ಮಂದಿ ಕಾರ್ಮಿಕರ ಸಾವು

ಮುಂಬೈ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಜನ ಕಾರ್ಮಿಕರು ಮೃತಪಟ್ಟು 8 ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ವಿಲಾಸ್ ಕದಂ( 36) ಸಚಿನ್ ತಳವಾರ್ (22) ಹಾಗೂ ಮಂಗೇಶ್ ಜಾಮ್ಕರ್ (22) ಮೃತ ದುರ್ದೈವಿಗಳು. ಗಾಯಗೊಂಡಿರುವ ಎಂಟು ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿಯನ್ನು ನಿಯಂತ್ರಣ ತರುವಲ್ಲಿ ಯಶಸ್ವಿಯಾಗಿದ್ದಾರೆ.