Friday, 13th December 2024

ಹಮೀಡಿಯಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ: ನವಜಾತ ಶಿಶುಗಳ ಸಾವು

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನ ರಾಜಧಾನಿ ಹಮೀಡಿಯಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ, 4 ನವಜಾತ ಶಿಶುಗಳು ಮೃತಪಟ್ಟಿವೆ. ಕಮಲ ನೆಹರು ಕಟ್ಟಡದ ಮೂರನೇ ಮಹಡಿಯಲ್ಲಿರುವ ಮಕ್ಕಳ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿದೆ.

ಮೂರು ಗಂಟೆಗಳ ಸತತ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ರಾತ್ರಿ 9 ಗಂಟೆ ಸುಮಾರಿಗೆ ಹಮೀದಿಯಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಅಗ್ನಿಶಾಮಕ ದಳದವರು ಅದನ್ನು ನಂದಿಸಲು ಹರಸಾಹಸ ಪಡಬೇಕಾ ಯಿತು.

ಅಪಘಾತದ ನಂತರ, ವೈದ್ಯಕೀಯ ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು 36 ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಮೃತ ಮಕ್ಕಳ ಸಂಬಂಧಿಕರಿಗೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸಚಿವರು ಹೇಳಿದ್ದಾರೆ.