Saturday, 14th December 2024

ಮಾಸ್ಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರ ಸಾವು, 125 ಮಂದಿ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ.

ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿ ಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿ ದ್ದಾರೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಕಾರ್ಯಾಚರಣೆ ಆರಂಭಿಸಿದ್ದು, 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.

ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್​​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಾರೆಲಿ ಗ್ರಾಮದ ಮಾಸ್ಕ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು 200 ಕಾರ್ಮಿಕರು ಒಳಗೆ ಸಿಲುಕಿದ್ದರು. ಬೆಂಕಿಯಿಂದ ತಪ್ಪಿಸಿ ಕೊಳ್ಳಲು ಕಟ್ಟಡಕ್ಕೆ ಹಾಕಲಾಗಿದ್ದ ಪೈಪ್​ ಹಿಡಿದು ಕೆಳಗಿಳಿಯುವಾಗ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಹಲವರಿಗೆ ಸುಟ್ಟ ಗಾಯವಾಗಿದೆ.

ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಾರ್ಖಾನೆಯೊಳಗಿದ್ದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಲಾಗಿದೆ.

ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಜೂನ್‌ನಲ್ಲಿ ನಡೆದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಮೃತಪಟ್ಟು ಹಲವರು ನಾಪತ್ತೆಯಾಗಿದ್ದರು.