Saturday, 14th December 2024

ನಿಜಾಮ್ ಕ್ಲಬ್ ನಲ್ಲಿ ಬೆಂಕಿ ಅವಘಡ

ಹೈದರಾಬಾದ್: ನಗರದ ಸೈಫಾಬಾದ್ ನ ನಿಜಾಮ್ ಕ್ಲಬ್ ನಲ್ಲಿ ಭಾನುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಫಲ ರಾಗಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆಸ್ತಿ-ಪಾಸ್ತಿಗೆ ಸ್ವಲ್ಪ ಹಾನಿಯುಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಜಾಮ್ ಕ್ಲಬ್ ನ ಸಿಬ್ಬಂದಿ ಕಟ್ಟಡದ ಬ್ಲಾಕ್ ವೊಂದರ ಪೆಂಟ್ ಹೌಸ್ ನಲ್ಲಿ ಬೆಂಕಿ ಹೊತ್ತಿಕೊಳ್ಳುವುದನ್ನು ಕಂಡು ಕೂಡಲೇ ಕ್ಲಬ್ ನ ಮುಖ್ಯಸ್ಥರಿಗೆ ತಿಳಿಸಿದರು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಸುದ್ದಿ ಮುಟ್ಟಿಸಲಾಯಿತು. ಹತ್ತೇ ನಿಮಿಷದಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ ಹತ್ತಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.