Tuesday, 22nd October 2024

ಭಾರೀ ಅಗ್ನಿ ಅವಘಡ: 40 ಕಾರ್ಮಿಕರು ಪಾರು

ನವದೆಹಲಿ : ದೆಹಲಿಯ ಪ್ರತಾಪ್ ನಗರದ ಕಾರ್ಖಾನೆಯೊಂದರಲ್ಲಿ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ, 40 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೌಂದರ್ಯವರ್ಧಕ, ಅಟಿಕೆಗಳು ಮತ್ತು ಬ್ಯಾಗ್ ತಯಾರಿಸುವ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಕಾರ್ಖಾನೆಯಲ್ಲಿ 40 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳು ತ್ತಿದ್ದಂತೆ ಸ್ಥಳಕ್ಕೆ 18 ಅಗ್ನಿ ಶಾಮಕದಳ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.