Wednesday, 11th December 2024

ಪುಣೆಯ ಹಳೆಯ ಮಾರುಕಟ್ಟೆಯಲ್ಲಿ ಬೆಂಕಿ ಅನಾಹುತ: 25 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಪುಣೆ: ಮಹಾರಾಷ್ಟ್ರ ರಾಜ್ಯದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ. 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ.

ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.  ಮಾಹಿತಿ ಸಿಕ್ಕ ಕೂಡಲೇ ಒಂಬತ್ತು ನೀರಿನ ಟ್ಯಾಂಕರ್ ‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆವು. ಅಗ್ನಿ ಶಾಮಕ ದಳ ಸಿಬ್ಬಂದಿಯು ಅರ್ಧ ಗಂಟೆಗೊಳಗೆ ಬೆಂಕಿ ನಂದಿಸುವಲ್ಲಿ ಸಫಲರಾದರು’ ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್‌ ರಾನ್‌ಪೈಸ್ ಮಾಹಿತಿ ನೀಡಿದರು.

ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ’ ಎಂದು ಹೇಳಿದರು.