Saturday, 14th December 2024

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಘಟನೆಗೆ ಪ್ರಧಾನಿ ಸಂತಾಪ

ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಕೋವಿಡ್-19 ರೋಗಿ ಗಳಿಗೆ ಮೀಸಲಾಗಿದ್ದ ತೀವ್ರ ನಿಗಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ.

ದುರ್ಘಟನೆ ನಡೆಯುವ ವೇಳೆ ಐಸಿಯುನಲ್ಲಿ ಸುಮಾರು 11 ಮಂದಿ ರೋಗಿ ಗಳಿದ್ದರು. 6 ಮಂದಿಯನ್ನು ರಕ್ಷಿಸಲಾಗಿದ್ದು ಉಳಿದ ಐವರು ಮೃತಪಟ್ಟಿದ್ದಾರೆ.

ಎರಡನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಕೋಟ್ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ಎಲ್ಲಾ ರೋಗಿಗಳನ್ನು ಸದ್ಯ ಪಕ್ಕದ ಇನ್ನೊಂದು ಆಸ್ಪತ್ರೆಗೆ ವರ್ಗಾಯಿಸ ಲಾಗಿದೆ.

ರಾಜ್ ಕೋಟ್ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಐವರು ಮೃತಪಟ್ಟ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಆಸ್ಪತ್ರೆಯ ಆಡಳಿತ ಸಿಬ್ಬಂದಿ ಬೆಂಕಿ ಅವಘಡದಲ್ಲಿ ಸಿಲುಕಿ ಮೃತಪಟ್ಟವರ ಕುಟುಂಬ ಕ್ಕೆ ಎಲ್ಲಾ ರೀತಿಯ ಸಹಾಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.