Sunday, 13th October 2024

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವಿಗೀಡಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮುಂಬೈನಿಂದ ಸುಮಾರು 400 ಕಿಮೀ ದೂರದಲ್ಲಿರುವ ಬಾರ್ಶಿ ತಾಲೂಕಿನ ಶಿರಾಳ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಂತರ ಮೂವರು ಕಾರ್ಮಿಕರು ಸಾವಿಗೀಡಾ ಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.
ಗಾಯಾಳುಗಳಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ಕಾರ್ಮಿಕ ಸೋಲಾಪುರ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Read E-Paper click here