ಓಮೈಕ್ರಾನ್ ಸೋಂಕು ತಗುಲಿದ ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಓಮಿಕ್ರಾನ್ ಸೋಂಕು ಕಾರಣ ಎಂದು ಪರಿಗಣಿಸದಂತೆ ಹೇಳಲಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳಲ್ಲೇ 198 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿ ರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 5,368 ಮಂದಿಗೆ ಕೊವಿಡ್-19 ಸೋಂಕು ತಗುಲಿ ರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಬುಧವಾರಕ್ಕಿಂತ ಗುರುವಾರ ಪತ್ತೆಯಾದ ಸೋಂಕಿತ ಪ್ರಕರಣಗಳಲ್ಲಿ ಶೇ.37ರಷ್ಟು ಏರಿಕೆಯಾಗಿದೆ.
ಕಳೆದ ಡಿ.28ರಂದು ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ಸ್ಥಳೀಯ ಯಶವಂತರಾವ್ ಚೌವ್ಹಾಣ್ ಆಸ್ಪತ್ರೆಯಲ್ಲಿ 52 ವರ್ಷದ ವ್ಯಕ್ತಿ ಮೃತ ಪಟ್ಟಿದ್ದು, ಇವರಿಗೆ ಓಮೈಕ್ರಾನ್ ಸೋಂಕು ತಗುಲಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ನೈಜೀರಿಯಾಗೆ ಪ್ರಯಾಣಿಸಿದ ಹಿನ್ನೆಲೆ ಯನ್ನು ಹೊಂದಿರುವ ವ್ಯಕ್ತಿಯ ಸಾವನ್ನು ದೇಶದಲ್ಲಿ ಮೊದಲ ಓಮಿಕ್ರಾನ್ ಸೋಂಕಿನ ಸಾವು ಎಂದು ತಿಳಿಸಲಾಗಿದೆ.ಮಹಾರಾಷ್ಟ್ರದ ಪೈಕಿ ಮಹಾನಗರಿ ಮುಂಬೈನಲ್ಲಿ ಅತಿಹೆಚ್ಚು ಕರೋನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 3,671 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.