Sunday, 8th September 2024

ರೂಪಾಂತರಿ ಓಮಿಕ್ರಾನ್: ಗೋವಾದಲ್ಲಿ ಮೊದಲ ಪ್ರಕರಣ ಪತ್ತೆ

ಪಣಜಿ: ಗೋವಾದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಮೊದಲ ಪ್ರಕರಣ ಸೋಮವಾರ ದಾಖಲಾಗಿದೆ. ಭಾರತದ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 578.

ಯುಕೆಯಿಂದ ಗೋವಾಕ್ಕೆ ಆಗಮಿಸಿದ 8 ವರ್ಷದ ಬಾಲಕನಿಗೆ ಓಮಿಕ್ರಾನ್ ಸೋಂಕು ತಗುಲಿದೆ. ರಾಜ್ಯದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ದಾಖಲಾಗಿದೆ.

ಡಿ.17ರಂದು ಬಾಲಕ ಯುಕೆಯಿಂದ ರಾಜ್ಯಕ್ಕೆ ವಾಪಸ್ ಆಗಿದ್ದ. ಪುಣೆಯ ಲ್ಯಾಬ್‌ನಿಂದ ವರದಿ ಬಂದಿದೆ” ಎಂದು ಹೇಳಿದ್ದಾರೆ.

ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸೂಚನೆಯನ್ನು ನೀಡಿದ್ದಾರೆ. ಕೋವಿಡ್ ಹರಡು ವಿಕೆ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಹೇಳಿದ್ದಾರೆ.

ಕಳೆದ ಭಾನುವಾರ ಗೋವಾದಲ್ಲಿ 25 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 1,80,050. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಶೂನ್ಯವಾಗಿದೆ.

ಸೋಮವಾರ ರಾಜಸ್ಥಾನದಲ್ಲಿ 2 ಹೊಸ ಪ್ರಕರಣಣ ದಾಖಲಾಗಿದೆ. ಜೈಪುರದಲ್ಲಿ 1, ಉದಯಪುರದಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಒಟ್ಟು ಪ್ರಕರಣ ಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಇದರಲ್ಲಿ 37 ಸೋಂಕಿತರು ಗುಣಮುಖಗೊಂಡಿದ್ದಾರೆ. ಗುಜರಾತ್ ಸರ್ಕಾರ ಕಳೆದ ವಾರವೇ ರಾಜ್ಯದಲ್ಲಿ ಕೋವಿಡ್ ಸೋಂಕಿನ ನಿಯಂತ್ರಣಕ್ಕಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

ಹೊಸ ವರ್ಷದ ಸಂದರ್ಭದಲ್ಲಿ ಜನರು ಗುಂಪು ಸೇರುವುದು ತಡೆಯಲು, ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ಮಾಡುವುದನ್ನು ನಿಯಂತ್ರಿಸಲು ನೈಟ್ ಕರ್ಫ್ಯೂ ಜಾರಿಗೊಳಿಸಿವೆ. ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ 50ರಷ್ಟು ಜನರು ಮಾತ್ರ ಸೇರಬೇಕು ಎಂಬ ನಿಯಮ ಜಾರಿಗೊಳಿಸಿವೆ.

error: Content is protected !!