Saturday, 14th December 2024

80 ಭಾರತೀಯ ಮೀನುಗಾರರ ಬಿಡುಗಡೆ

ಮೃತಸರ: ಮೀನುಗಾರಿಕೆಗೆ ತೆರಳಿದ್ದ ವೇಳೆ ಅಂತಾರಾಷ್ಟ್ರೀಯ ಗಡಿ ದಾಟಿದ ಹಿನ್ನೆಲೆ ಬಂಧನಕ್ಕೊಳಗಾಗಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ್ ಬಿಡುಗಡೆ ಮಾಡಿದೆ.

ಪಂಜಾಬ್‌ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಮೀನುಗಾರರನ್ನು ಬರಮಾಡಿಕೊಂಡರು.

ಮೀನುಗಾರರು, ಮೀನುಗಾರಿಕೆ ಮಾಡುವಾಗ ತಪ್ಪಾಗಿ ಪಾಕಿಸ್ತಾನದ ಗಡಿ ದಾಟಿದ್ದೇವೆ. ಅದೃಷ್ಟವಶಾತ್ ತಾಯ್ನಾಡಿಗೆ ವಾಪಾಸಾಗಿದ್ದೇವೆ. ಪಾಕಿಸ್ತಾನದ ಜೈಲುಗಳಲ್ಲಿ ಬಂಧಿಯಾಗಿರುವ ಇತರ ಭಾರತೀಯ ಮೀನುಗಾರರನ್ನೂ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.

ಅಲ್ಲದೆ, ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ” ಎಂದು ಹೇಳಿದರು.