Thursday, 12th December 2024

ಬಿಹಾರದಲ್ಲಿ ದುರಂತ ಘಟನೆ: ನಿದ್ದೆಯಲ್ಲಿದ್ದವರು ಬೆಂಕಿಗೆ ಆಹುತಿ

ಬಿಹಾರ: ಬಿಹಾರದ ಕಿಶನ್‌ಗಂಜ್‌ನಲ್ಲಿ ಸೋಮವಾರ ಬೆಳಗ್ಗೆ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ನಾಲ್ಕು ಅಪ್ರಾಪ್ತರು ಸೇರಿದಂತೆ ಕುಟುಂಬದ ಐದು ಮಂದಿ ಸದಸ್ಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಲಾಮ್ ಕಾಲೋನಿಯಲ್ಲಿರುವ ನೂರ್ ಆಲಂ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ಐವರು ನಿದ್ದೆಯಲ್ಲಿದ್ದರು ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಶಹನವಾಜ್ ಅಹ್ಮದ್ ನಿಯಾಜಿ ಹೇಳಿದ್ದಾರೆ.

‘ನೂರ್ ಆಲಂ ಇಬ್ಬರು ಪುತ್ರಿಯರು ಮತ್ತು ಪುತ್ರರು ಬೆಂಕಿಗೆ ಆಹುತಿಯಾದರು. ಪತ್ನಿಗೆ ಸುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸ ಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ. ಕೂಡಲೇ ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದರು. ‘ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣಗೊಂಡ ನಂತರ ಘಟನೆಯ ಹಿಂದಿನ ನಿಖರ ಕಾರಣ ತಿಳಿದುಕೊಳ್ಳಬಹುದು’ ಎಂದು ತಿಳಿಸಿದ್ದಾರೆ.

***

ಕ್ಷಣ ಕ್ಷಣದ ಸುದ್ದಿಗಾಗಿ ವಿಶ್ವವಾಣಿ ಫೇಸ್‌ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily