Thursday, 12th December 2024

ಪಂಚ ರಾಜ್ಯಗಳ ಚುನಾವಣೆ: ಇಂದು ವೇಳಾಪಟ್ಟಿ ಘೋಷಣೆ ?

ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ.

ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ವೇಳಾಪಟ್ಟಿ ಪ್ರಕಟಿಸಲಿದ್ದಾರೆ. ಕರೊನಾ ಸಂಕಷ್ಟದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಇಷ್ಟು ದೊಡ್ಡ ಮಟ್ಟದ ಚುನಾವಣೆ ನಡೆಯುತ್ತಿದೆ.

ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿತ್ತು.