ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್ಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿತ್ತು. ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಚಾರಣೆಗೆ ಲಾಲೂ ಪ್ರಸಾದ್ ಯಾದವ್ ಆಗಮಿಸಿದ್ದರು. ಇಂದು ಶಿಕ್ಷೆ ಪ್ರಕಟವಾಗಿದ್ದು, ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.
ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಎಸ್ಕೆ ಶಶಿ ಅವರು 6 ಮಹಿಳೆ ಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾ ಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಿದ್ದಾರೆ.
ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಇಂದು ತೀರ್ಪು ವೇಳೆ ಪ್ರಕಟಿಸಿದೆ.
ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಭೌತಿಕವಾಗಿ ಹಾಜರಾಗಲು ರಾಂಚಿಗೆ ಆಗಮಿಸಿದ್ದರು.