ನವದೆಹಲಿ: ಕೇಂದ್ರ ದೆಹಲಿಯ ಸಬ್ಜಿ ಮಂಡಿ ಪ್ರದೇಶದ ಫ್ಲಾಟ್ನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು, ಆರು ಮಕ್ಕಳು ಸೇರಿದಂತೆ ಒಟ್ಟು 16 ಜನರನ್ನು ರಕ್ಷಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡ ಬಗ್ಗೆ ಬೆಳಿಗ್ಗೆ ಕರೆ ಬಂದಿತು ಮತ್ತು ತಕ್ಷಣ ಎಂಟು ಅಗ್ನಿಶಾಮಕ ವಾಹನಗಳನ್ನು ಸಹ ಸೇವೆಗೆ ನಿಯೋಜಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಘಟನೆ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೂ ಮಾಹಿತಿ ನೀಡಲಾಗಿದೆ. ನಾವು ಆರು ಮಕ್ಕಳು, ಏಳು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದಂತೆ 16 ಜನರನ್ನು ರಕ್ಷಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ವರದಿಯಲ್ಲಿ ತಿಳಿಸಿದ್ದಾರೆ.
ಫ್ಲಾಟ್ನೊಳಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಇದರಿಂದ ಬಂಕಿ ನಂದಿಸುವ ಕಾರ್ಯಾಚರಣೆ ಸಹ ಅಧಿಕಾರಿಗಳಿಗೆ ಸವಾಲಿನದಾಗಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಸದ್ಯ ನಂದಿಸಲಾಗಿದೆ ಮತ್ತು ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ರನಿಖೆ ನಡೆಸುತ್ತಿದ್ದಾರೆ. ಆದ್ರೆ ಇದುವರೆಗೆ 16 ಮಂದಿಯನ್ನು ಪ್ರಾಣಪಾಯದಿಂದ ಅಗ್ನಿಶಾಮಕ ತಂಡ ರಕ್ಷಿಸಿದೆ. ಇದರಲ್ಲಿ 6 ಮಕ್ಕಳನ್ನು ರಕ್ಷಿಸಲಾಗಿದೆ.