ನವದೆಹಲಿ: ರಾಜಿಂದರ್ ನಗರದ ಕೋಚಿಂಗ್ ಸೆಂಟರಿನ ನೆಲಮಾಳಿಗೆಯಲ್ಲಿ ಮುಳುಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಇನ್ನೂ ಐದು ಜನರನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಐವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ 7ಕ್ಕೇರಿಕೆಯಾಗಿದೆ.
ದೆಹಲಿಯ ಓಲ್ಡ್ ರಾಜಿಂದರ್ ನಗರ ಏರಿಯಾದಲ್ಲಿರುವ ಐಎಎಸ್ ತರಬೇತಿ ಕೇಂದ್ರಕ್ಕೆ ಏಕಾಏಕಿ ಪ್ರವಾಹದಂತೆ ನೀರು ನುಗ್ಗಲಾರಂಭಿಸಿದೆ. ತರಬೇತಿ ಕೇಂದ್ರ ನೆಲಮಾಳಿಗೆಯಲ್ಲಿದ್ದು, ನೆಲಮಾಳಿಗೆ ಕ್ಷಣಾರ್ಧದಲ್ಲಿ ಸಂಪೂರ್ಣ ಜಲಾವೃತಗೊಂಡಿದೆ. ನೆಲಮಾಳಿಗೆಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ದುರಂತದಲ್ಲಿ ಮೃತಪಟ್ಟವರನ್ನು 25 ವರ್ಷದ ತಾನ್ಯಾ ಸೋನಿ, ಉತ್ತರ ಪ್ರದೇಶ ಮೂಲದ ಶ್ರೇಯಾ ಯಾದವ್ ಹಾಗೂ 28 ವರ್ಷದ ನವೀನ್ ದಲ್ವಿನಿ ಎಂದು ಗುರುತಿಸಲಾಗಿದೆ.