ನವದೆಹಲಿ: ಪಂಜಾಬ್ನಲ್ಲಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕೈಗೆ ಕಾಂಗ್ರೆಸ್ ಬ್ಯಾಟ್ ಸಿಕ್ಕಿದೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕಗೊಂಡಿದ್ದಾರೆ.
ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸಂಗತ್ ಸಿಂಗ್ ಗಿಲ್ಜಿಯನ್, ಸುಖ್ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್, ಕುಲ್ಜಿತ್ ಸಿಂಗ್ ನಗ್ರ ನೇಮಕಗೊಂಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರೋಧದ ನಡುವೆಯೂ ಸಿಧುಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.
ಸಿಧು ಅವರನ್ನು ಕಾಂಗ್ರೆಸ್ ನ ಪಂಜಾಬ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ. ನಿರ್ಗಮಿತ ಅಧ್ಯಕ್ಷ ಸುನಿಲ್ ಜಖರ್ ಅವರ ಕೊಡುಗೆಯನ್ನು ಮೆಚ್ಚುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.